ತಾಳಿಕೋಟೆ :ತಾಲ್ಲೂಕಿನ ಮಿಣಜಗಿ ಸರ್ಕಾರಿ ಪ್ರೌಢಶಾಲೆಯ 9ನೆಯ ತರಗತಿ ವಿದ್ಯಾರ್ಥಿನಿ ಅಕ್ಷತಾ ಹಳ್ಳೂರ ಇವಳು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯ ಪೋಲ್ ವಾಲ್ಟ್ ( ಕೋಲು ನೆಗೆತ ) ಸ್ಪರ್ಧೆಯಲ್ಲಿ ದ್ವಿತೀಯಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಇದೇ ಡಿ.13 ರಿಂದ ಉತ್ತರ ಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾಳೆ.
ಈ ಕ್ರೀಡಾಪಟುವಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ರಾವತ ಪೂಜೇರಿಯವರಿಗೆ ಶಾಲೆಯ ಮುಖ್ಯ ಶಿಕ್ಷಕಕ
ಬಿ.ಹೆಚ್ .ತಿಳಗೂಳ, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಶಂಕರಗೌಡ ಬಿರಾದಾರ ಮತ್ತು ಸದಸ್ಯರು, ಶಾಲೆಯ ಶಿಕ್ಷಕರು, ಗ್ರಾಮಸ್ಥರು ಅಭಿನಂದಿಸಿದ್ದಾರೆ.
