ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಸಹಯೋಗದಲ್ಲಿ 9ನೇ ಕಲಬುರ್ಗಿ ವಿಭಾಗ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟವು ಬೀದರಿನ ಆರ್.ವಿ. ಬಿಡಪ್ಪ ಲಾ ಕಾಲೇಜಿನಲ್ಲಿ ವಿಜೃಂಭಣೆಯಿಂದ ನೆರವೇರಿತು.
ಈ ಸ್ಪರ್ಧೆಯಲ್ಲಿ ಅರುಂಧತಿ ಲಾ ಕಾಲೇಜಿನ ವಿದ್ಯಾರ್ಥಿನಿ ಭಾರತಿ ಗುಡದೂರು ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ. 5000 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಬಂಗಾರದ ಪದಕ ಮತ್ತು ಪ್ರಮಾಣ ಪತ್ರವನ್ನು ಗಳಿಸಿದ್ದು, 800 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕವೂ ತಮ್ಮದಾಗಿಸಿಕೊಂಡಿದ್ದಾರೆ. ಇವರ ಈ ಸಾಧನೆಯ ಆಧಾರದ ಮೇಲೆ ಅವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಭಾರತಿ ಗುಡದೂರ ಅವರ ಈ ಯಶಸ್ಸಿಗೆ ಕಾಲೇಜು ಸಂಸ್ಥೆಯ ಅಧ್ಯಕ್ಷರು, ಕಾಲೇಜಿನ ಪ್ರಾಚಾರ್ಯರಾದ ಲಕ್ಷ್ಮೀಶ ಪೂಜಾರಿ, ಸಿಬ್ಬಂದಿ ಸದಸ್ಯರಾದ ನವೀನ್ ಕುಮಾರ್, ಹಾಗೂ ಕಾಲೇಜಿನ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು
