ಮಾನ್ವಿ: ಪಟ್ಟಣದ ಕಾಕತೀಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶಿಕ್ಷಣ ಇಲಾಖೆ ಹಾಗೂ ಕಾಕತೀಯ ಶಿಕ್ಷಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ನಡೆದ 2025-26 ನೇ ಸಾಲಿನ ಮಾನವಿ ನಗರ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಮಾರುತಿ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿ ಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಹೊರಬರುವುದಕ್ಕೆ ಸಾಧ್ಯವಾಗುತ್ತದೆ ಎನ್ನುವ ಉದ್ದೇಶದಿಂದ ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು .ವಲಯ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ಉತ್ತಮವಾದ ವೇದಿಕೆಯನ್ನು ಕಲ್ಪಿಸುತ್ತಿದೆ ಅದ್ದರಿಂದ ಶಾಲೆಯ ಗುರುಗಳು ತಮ್ಮ ವಿದ್ಯಾರ್ಥಿಯಲ್ಲಿನ ಕೌಶಲ್ಯಾವನ್ನು ಗುರುತಿಸಿ ಅವರಿಗೆ ಸರಿಯಾದ ಮಾರ್ಗದರ್ಶನವನ್ನು ನೀಡಿದಲ್ಲಿ ವಿದ್ಯಾರ್ಥಿಗಳು ಉತ್ತಮವಾದ ಸಾಧನೆಯನ್ನು ತೊರುವುದಕ್ಕೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಮಾನ್ವಿ ವಲಯ ಮಟ್ಟದ ವಿವಿಧ ಶಾಲೆಯ ವಿದ್ಯಾರ್ಥಿಗಳು ಭಾರತ ನಾಟ್ಯ. ನೃತ್ಯ,ಜನಪದ ನೃತ್ಯ,ಗಾಯಮ ,ಮಣ್ಣಿನಿಂದ ಆಕೃತಿಗಳ ರಚನೆ,ಚಿತ್ರಕಲೆ,ಭಾಷಣ,ರಂಗೋಲಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ತಮ್ಮ ಪ್ರತಿಭೆಯನ್ನು ತೊರಿ ಗಮನ ಸೇಳೆದರು.
ಕಾರ್ಯಕ್ರಮದಲ್ಲಿ ಪ್ರಾ.ಶಾ.ಶಿಕ್ಷಕರ ಸಂಘದ ತಾ.ಅಧ್ಯಕ್ಷರಾದ ಸಂಗಮೇಶ ಮುಧೋಳ್, ಸರಕಾರಿ ನೌಕರರ ಸಂಘದ ತಾ.ಅಧ್ಯಕ್ಷರಾದ ಸುರೇಶ ಕುರ್ಡಿ, ಫ್ರೌಡಶಾಲಾ ಶಿಕ್ಷಕರ ಸಂಘದ ತಾ.ಅಧ್ಯಕ್ಷರಾದ ಅಶೋಕ ಕುಮಾರ, ಕಾಕತೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸುಂದರ ಶ್ರೀನಿವಾಸ,ಮುಖ್ಯ ಗುರುಗಳಾದ ವೀರಭದ್ರಗೌಡ, ನಿರ್ದೇಶಕರಾದ ಸೈಯಾದ್ ಮತವಾಲ್, ಹಂಪಣ್ಣ ಚಂಡೂರ್,ಸಿ.ಆರ್.ಪಿ.ಗಳಾದ ಹಾಲೇಶ್,ಸೋಮಶೇಖರ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
ಮಾನ್ವಿ: ಪಟ್ಟಣದ ಕಾಕತೀಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಮಾರುತಿ ಉದ್ಘಾಟಿಸಿದರು.

Leave a Reply

Your email address will not be published. Required fields are marked *