ರಾಯಚೂರು ಡಿಸೆಂಬರ್ 09 (ಕರ್ನಾಟಕ ವಾರ್ತೆ): ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಜಿಲ್ಲೆಯ 08 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು, ಇಲಾಖೆಯ ವೆಬ್‌ಸೈಟ್ ವಿಳಾಸ:https://karnemakaone.kar.nic.in/abcd/ ನಲ್ಲಿ ಜನವರಿ 7 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರಾಯಚೂರು, ಗಿಲ್ಲೇಸುಗೂರು, ಮಾನವಿ, ಸಿರವಾರ, ಸಿಂಧನೂರು, ತುರವಿಹಾಳ ಲಿಂಗಸುಗೂರು ಹಾಗೂ ದೇವದುರ್ಗ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಾರ್ಯಾಲಯವನ್ನು ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
