ರಾಯಚೂರು ಡಿಸೆಂಬರ್ 09 (ಕರ್ನಾಟಕ ವಾರ್ತೆ): ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿಯಲ್ಲಿ ರಾಜ್ಯದ ಸಾರ್ವಜನಿಕರಿಗೆ ವಿವಿಧ ಪ್ರಮಾಣ ಪತ್ರಗಳ ಸೇವೆಯನ್ನು ನೀಡಲು ರಾಯಚೂರು ಜಿಲ್ಲೆಯ ನಾಡಕಚೇರಿಗಳಲ್ಲಿ ಅಕ್ಟೋಬರ್ 2025ರ ಮಾಹೆಯಲ್ಲಿ ಸ್ವೀಕರಿಸಲಾಗಿರುವ 26,831 ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ.99.93ರಷ್ಟು ವಿಲೇವಾರಿ ಮಾಡಿ 6.4 ಸಿಗ್ಮಾ ಮೌಲ್ಯವನ್ನು ಪಡೆದಿರುತ್ತೀರಿ. 8.49 ವಿಲೇವಾರಿ ಸೂಚ್ಯಂಕದ ಪ್ರಕಾರ ತಮ್ಮ ಜಿಲ್ಲೆಯಲ್ಲಿ 9.49 ಪಟ್ಟು ನಿಗಧಿತ ಅವಧಿಗಿಂತ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ, ಅಕ್ಟೋಬರ್-2025ರ ಮಾಹೆಯಲ್ಲಿ ತಮ್ಮ ಜಿಲ್ಲೆಯು ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುವುದು ಶ್ಲಾಘನೀಯ ಎಂದು ಕಂದಾಯ ಇಲಾಖೆಯ ಆಯುಕ್ತರಾದ ಮುಲ್ಲೆ ಮುಹಿಲನ್ ಎಂ.ಪಿ.ಅವರು ರಾಯಚೂರಿನ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
ನಿಮ್ಮ ಜಿಲ್ಲೆಯಲ್ಲಿನ ಈ ಕಾರ್ಯ ಸಾಧನೆಗೆ ನಿಮ್ಮ ಹಾಗೂ ನಿಮ್ಮ ನಾಡ ಕಚೇರಿ ಅಥವಾ ಅಟಲ್‌ಜೀ ಜನಸ್ನೇಹಿ ಕೇಂದ್ರದ ಸಿಬ್ಬಂದಿಗಳ ಸಹಕಾರ, ಕಾರ್ಯತತ್ಪರತೆ ಕಾರಣವಾಗಿರುತ್ತದೆ. ಅದ್ದರಿಂದ ಅಟಲ್‌ಜೀ ಜನಸ್ನೇಹಿ ನಿರ್ದೇಶನಾಲಯದ ಪರವಾಗಿ ನಿಮ್ಮ ತಂಡಕ್ಕೆ ನನ್ನ ಅಭಿನಂದನೆಯನ್ನು ವ್ಯಕ್ತಪಡಿಸಲು ಇಚ್ಛಿಸುತ್ತೇನೆ. ಇನ್ನು ಮುಂದಿನ ದಿನಗಳಲ್ಲಿಯೂ ಸಹ ನಿಮ್ಮಿಂದ ಇದೇ ರೀತಿಯ ಸಹಕಾರ ಹಾಗೂ ಕಾರ್ಯಕ್ಷಮತೆಯನ್ನು ನಿರೀಕ್ಷಿಸುತ್ತೇನೆ ಎಂದು ಕಂದಾಯ ಇಲಾಖೆಯ ಆಯುಕ್ತರು ಅಭಿನಂದನಾ ಪತ್ರದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *