ಡಿ.10 ರಿಂದ 14 ರವರೆಗೆ ಜೆಎನ್ ಟಿಯು ವಿಶ್ವವಿದ್ಯಾಲಯ ಕಾಕಿನಾಡ ಆಂಧ್ರ ಪ್ರದೇಶದಲ್ಲಿ ನಡೆಯುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ಪುರುಷರ ವಾಲಿಬಾಲ್ ಕ್ರೀಡಾಕೂಟಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ತಂಡದ ಮುಖ್ಯ ತರಬೇತುದಾರರಾಗಿ ಸಿಂಧನೂರು ಡಿಗ್ರಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶಿವ.ಕೆ ಆಯ್ಕೆಯಾಗಿದ್ದಾರೆ.
ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ತಂಡವನ್ನು ಪ್ರತಿನಿಧಿಸಿ, ಮುಖ್ಯ ತರಬೇತುದಾರರಾಗಿ ಆಯ್ಕೆಯಾದ ಶಿವು ಕೆ ಅವರು ನಮ್ಮ ಕಾಲೇಜಿಗೂ ಹಾಗೂ ತಾಲೂಕಿಗೂ ಕೀರ್ತಿ ತಂದಿದ್ದಾರೆ. ಡಿಗ್ರಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಪ್ರಾಚಾರ್ಯರು, ಭೋದಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿ ಬಳಗದಿಂದ ಶಿವು ಕೆ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
