ಬೆಳಗಾವಿ: ಡಿಸೆಂಬರ್ 11 ರಂದು ಮಂಡಲ ವಿಧಾನಪರಿಷತ್ತಿನ ಅಧಿವೇಶನದ, ಕಲಾಪದಲ್ಲಿ ರಾಯಚೂರಿಗೆ ಏಮ್ಸ್ ಮಂಜೂರು ಮಾಡುವ ವಿಚಾರ ಸದನದಲ್ಲಿ ಪ್ರತಿಧ್ವನಿಸಿತು.ಸಣ್ಣನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಪರಿಷತ್ತಿನ ಸಭಾ ನಾಯಕರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಬೋಸರಾಜು ಅವರು ಅದಕ್ಕೆ ತಕ್ಕ ಉತ್ತರವನ್ನೂ ಕೇಂದ್ರದ ಮಂತ್ರಿಗಳು ಮುಂದಿನ ವರ್ಷ ರಾಯಚೂರಿಗೆ ಏಮ್ಸ್ ಮಂಜೂರು ಮಾಡುತ್ತೇವೆ ಎಂದು ರಾಯಚೂರು ಭೇಟಿ ಸಂದರ್ಭದಲ್ಲಿ ಭರವಸೆ ನೀಡಿದರು.ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂತು. ಅದಕ್ಕೆ ಕೊಟ್ಟ ಮಾತು ಬಿಜೆಪಿ ಪಕ್ಷ ಮರೆತು ಹೋಗಿದೆಯೇ?. ಆದರೆ, ಕಾಂಗ್ರೆಸ್ ಸರ್ಕಾರ ಏಮ್ಸ್ ಪ್ರಸ್ತಾಪ ಬಿಟ್ಟಿಲ್ಲ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು 5 ಸಲ ಕೇಂದ್ರ ಮತ್ತು ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದು ರಾಯಚೂರಿಗೆ ಏಮ್ಸ್ ನೀಡುವಂತೆ ಮನವಿ ಮಾಡಿದ್ದಾರೆ. ನಾನು ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ ಪಾಟೀಲರು 3 ಬಾರಿ, ಶಾಸಕರು, ನಿಯೋಗದೊಂದಿಗೆ ದೆಹಲಿಗೆ ಹೋಗಿ ಸಂಬಂಧ ಪಟ್ಟ ಮಂತ್ರಿಗಳಿಗೆ ಸಚಿವಾಲಯಕ್ಕೆ ರಾಯಚೂರಿಗೆ ಏಮ್ಸ್ ಮಂಜೂರು ಮಾಡಿ ಅಂತ ಪದೇ ಪದೇ ಮನವಿ ಮಾಡಕಾಗಿದೆ. ಇಷ್ಟಾದರೂ ಕೇಂದ್ರ ಬಿಜೆಪಿ ಸರ್ಕಾರ ಈ ತನಕ ರಾಯಚೂರಿಗೆ ಏಮ್ಸ್ ಮಂಜೂರು ಮಾಡುವಲ್ಲಿ ಮೀನಾ, ಮೇಷ ಎಣಿಸುತ್ತಿದೆ. ಇದರ ಹಿಂದಿನ ಉದ್ದೇಶ ಏನು ಅನ್ನೋದು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿಗೆ ಕಲ್ಯಾಣ ಕರ್ನಾಟಕ ಭಾಗದ ಜನರ ಹಿತ ಮುಖ್ಯವಲ್ಲ. ರಾಜಕೀಯವಷ್ಟೇ ಮುಖ್ಯ ಎಂದು ತಿರುಗೇಟು ನೀಡಿದರು.

