ಸಾಲುಮರದ ತಿಮ್ಮಕ್ಕ ಅವರ ಸ್ಮರಣಾರ್ಥ ನಿರುಪಾದೀ ಗೋಮರ್ಸಿ ಸಿಂಧನೂರು ಕೆ ಆರ್ ಎಸ್ ಪಕ್ಷದ ವತಿಯಿಂದ ಸಿಂಧನೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ವಿವಿಧ ರೀತಿಯ ಹಲವು ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡಿ ವೃಕ್ಷಮಾತೆಗೆ ನಮನ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರಾದ ಶ್ರೀ ಶರಣಪ್ಪ ಸಸಿಗಳಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಪರಿಸರ ಕ್ಷೇತ್ರದಲ್ಲಿ ಆಘಾದ ಸಾಧನೆಗೈದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವನಸಿರಿ ಶ್ರೀ ಅಮರೇಗೌಡ ಮಲ್ಲಾಪುರ ಸೇರಿದಂತೆ ಪಕ್ಷದ ಯುವ ಘಟಕದ ರಾಜ್ಯ ಕಾರ್ಯದರ್ಶಿ ದ್ಯಾವಣ್ಣ ಪುಲದಿನ್ನಿ, ಜಿಲ್ಲಾ ಉಪಾಧ್ಯಕ್ಷರಾದ ಕೃಷ್ಣ ಸುಕಾಲಪೇಟೆ ಪಕ್ಷದ ಮುಖಂಡರಾದ ಮೂರ್ತುಜಾ,ಖಾಜಸಾಬ್,ಹನುಮಂತ,ಮೈಬುಸಾಬ್,ಸೇರಿದಂತೆ ಅನೇಕರು ಭಾಗವಹಿಸಿದ್ದರು.

