ಮಾನ್ವಿ:
ಅಪರಾಧ ತಡೆ ಮಾಸಾಚರಣೆಯ ಪ್ರಯುಕ್ತವಾಗಿ ಮಾನ್ವಿ ಪೊಲೀಸ್ ಠಾಣಾ ವತಿಯಿಂದ ಪಟ್ಟಣದ ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿ ಅಪರಾಧ ತಡೆ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಮಾನ್ವಿ ಪೊಲೀಸ್ ಠಾಣೆಯ ಪಿಎಸ್‌ಐ ಅಜ್ಮೀರ್ ಅವರು ಮಾತನಾಡಿ, “ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಬೇಕು. ಯಾವುದೇ ರೀತಿಯ ಕೆಟ್ಟ ಚಟುವಟಿಕೆಗಳಿಗೆ ಬಲಿಯಾಗದೆ, ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕಾನೂನನ್ನು ಗೌರವಿಸಬೇಕು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರಿಗೆ ಸಹಕಾರ ನೀಡಬೇಕು. ಸೈಬರ್ ಅಪರಾಧಗಳ ಬಗ್ಗೆ ವಿದ್ಯಾರ್ಥಿಗಳು ಜಾಗರೂಕರಾಗಿರಬೇಕು” ಎಂದು ಸಲಹೆ ನೀಡಿದರು.
ಸಮಾಜದಲ್ಲಿನ ಅಪರಾಧಗಳ ಸ್ವರೂಪ, ಅಪರಾಧಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಮತ್ತು ಅಪರಾಧಗಳ ಬಗ್ಗೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವ ಕುರಿತು ವಿವರವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಎಎಸ್ ಐ ಹನುಮೇಶ್,ಸರ್ವೋದಯ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಈ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

