ಡಿಸೆಂಬರ್ 15 ರಿಂದ 19 ರವರೆಗೆ ಎಸ್.ಆರ್.ಎಮ್.
ವಿಶ್ವವಿದ್ಯಾಲಯ, ಚೆನ್ನೈ, ತಮಿಳುನಾಡಿನಲ್ಲಿ ನಡೆಯುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ಮಹಿಳಾ ವಾಲಿಬಾಲ್ ಕ್ರೀಡಾಕೂಟಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ತಂಡಕ್ಕೆ ನಗರದ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಪ್ರಾಂಶುಪಾಲರಾದ ಪ್ರೊ.ಪಾಂಡು ತಿಳಿಸಿದ್ದಾರೆ.
ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿರುವ ಕು.ಸಹನಾ ತಂ.ಪರನಗೌಡ ಬಿ.ಎಸ್.ಸಿ.ಪ್ರಥಮ ಸೆಮಿಸ್ಟರ್, ಕು.ಸಾವಿತ್ರಿ ತಂ.ಹನುಮಂತ ಬಿ.ಎಸ್.ಸಿ.ತೃತೀಯ ಸೆಮಿಸ್ಟರ್ ಇವರು, ಚೆನ್ನೈನಲ್ಲಿ ನಡೆಯುತ್ತಿರುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯದ ಮಹಿಳಾ ವಾಲಿಬಾಲ್ ಕ್ರೀಡಾಕೂಟಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ತಂಡವನ್ನು ಪ್ರತಿನಿಧಿಸಿ ಕಾಲೇಜಿಗೂ ಹಾಗೂ ನಮ್ಮ ತಾಲೂಕಿಗೂ ಕೀರ್ತಿ ತಂದಿದ್ದಾರೆ. ಇವರಿಗೆ ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಪ್ರಾಚಾರ್ಯರು, ಭೋದಕ, ಬೋಧಕೇತರ ಸಿಬ್ಬಂದಿ ವರ್ಗದವರು, ಹಾಗೂ ವಿದ್ಯಾರ್ಥಿ ಬಳಗದಿಂದ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ: ಹಿರಿಯ ಪ್ರಾಧ್ಯಾಪಕರಾದ ಪ್ರೊ. ಜಾಜಿ ದೇವೇಂದ್ರಪ್ಪ, ಪ್ರೊ.ಪುಷ್ಪ, ಪ್ರೊ.ಇಶ್ರತ್ ಬೇಗಂ, ಪತ್ರಾಂಕಿತ ವ್ಯವಸ್ಥಾಪಕರಾದ ಮೊಹಮ್ಮದ್ ಸಿದ್ದಿಕಿ, ಸಹಾಯಕ ಪ್ರಾಧ್ಯಾಪಕರಾದ ಜಯಶ್ರೀ ಪಾಟೀಲ್, ಉಪನ್ಯಾಸಕರಾದ ರಾಜೇಶ.ಎಂ, ದೈಹಿಕ ಶಿಕ್ಷಣ ವಿಭಾಗದ ಸಂಯೋಜಕರಾದ ಡಾ.ಲವಕುಮಾರ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಶಿವ.ಕೆ, ಉಪಸ್ಥಿತರಿದ್ದರು.

