ತಾಳಿಕೋಟಿ: ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ನಿಧನರಾದ ಹಂಚಲಿ ಗ್ರಾಮದ ಯೊಗೇಶ ನಾವಿ ಮನೆಗೆ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಸಮಾಜ ಸೇವಕರಾದ ಡಾ.ಪ್ರಭುಗೌಡ ಲಿಂಗದಳ್ಳಿ ಅವರು ಶುಕ್ರವಾರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ತಿಳಿಸಿ ತಮ್ಮ ನೇತೃತ್ವದ ಪಿ.ಬಿ.ಎಲ್. ಫೌಂಡೇಶನ್ ವತಿಯಿಂದ ಆರ್ಥಿಕ ಸಹಾಯ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕುಟುಂಬಕ್ಕೆ ಆಸರೆಯಾದ ಯೊಗೇಶ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದು ನೋವಿನ ಸಂಗತಿ, ನನ್ನ ಕೈಲಾದಷ್ಟು ಆರ್ಥಿಕ ಸಹಾಯ ಮಾಡಿದ್ದೇನೆ ಇದರ ಜೊತೆಗೆ ಅವರ ಮಕ್ಕಳ ಶಿಕ್ಷಣದ ವ್ಯವಸ್ಥೆಯನ್ನು ಮಾಡುತ್ತೇನೆ ಕುಟುಂಬಕ್ಕೆ ಆರೋಗ್ಯ ಸಮಸ್ಯೆಗಳು ಎದುರಾದಲ್ಲಿ ಇದನ್ನು ಸಂಪೂರ್ಣವಾಗಿ ಉಚಿತವಾಗಿ ಆಗುವಂತೆ ನೋಡಿಕೊಳ್ಳುತ್ತೇನೆ. ಗ್ರಾಮದ ಗಣ್ಯರು ಈ ಕುಟುಂಬದ ಸದಸ್ಯರ ಸುಖ ದುಃಖಗಳಲ್ಲಿ ಸದಾ ಭಾಗಿಯಾಗಬೇಕೆಂದು ವಿನಂತಿ ಮಾಡಿಕೊಳ್ಳುತ್ತೇನೆ ಎಂದರು. ಈ ಸಮಯದಲ್ಲಿ ನಾವಿ ಕುಟುಂಬದ ಸದಸ್ಯರು, ಗ್ರಾಮದ ಹಿರಿಯರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

