ನಗರದ ಶಿವಜ್ಯೋತಿ ನಗರದ ರೈಲ್ವೆ ಮಾರ್ಗವಾಗಿ ಬರುವ ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ವಾಲ್ಮೀಕಿ ಸಮುದಾಯದ ಮುಖಂಡರಿಂದ ಬಸ್ ಡಿಪೋ ಮ್ಯಾನೇಜರ್ ಗೆ ಮನವಿ ಪತ್ರ ಸಲ್ಲಿಸಲಾಯಿತು
ನಗರದ ಹೊರವಲಯದಲ್ಲಿ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ವಿದ್ಯಾರ್ಥಿನಿ ನಿಲಯಕ್ಕೆ ಬಸ್ ವ್ಯವಸ್ಥೆಯಿಲ್ಲದೆ, ವಿದ್ಯಾರ್ಥಿಗಳು ಸುಮಾರು 5 ಕಿ.ಮೀ ನಡೆದುಕೊಂಡೇ ಕಾಲೇಜಿಗೆ ಹೋಗಬೇಕಿದೆ. ವಾರ್ಡ್
ನಂ.19ರ ಶಿವಜ್ಯೋತಿ ನಗರದಲ್ಲಿರುವ ವಸತಿ ನಿಲಯದಲ್ಲಿ 228 ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರು, 75 ವ್ಯಾಸಂಗ ಮಾಡುತ್ತಿದ್ದು, ಈ ವಸತಿ ನಿಲಯಗಳು ನಿರ್ಜನ ಪ್ರದೇಶದಲ್ಲಿರುವ ಕಾರಣ ವಸತಿ ನಿಲಯದಿಂದ ಕುಷ್ಟಗಿ ರಸ್ತೆ ಸರಕಾರಿ ಮಹಾವಿದ್ಯಾಲಯಕ್ಕೆ 5 ಕಿ.ಮೀ ದೂರ ವಿದ್ಯಾರ್ಥಿನಿಯರು ಪ್ರತಿ ನಿತ್ಯವೂ ನಡೆದುಕೊಂಡೆ ಹೋಗುತ್ತಿದ್ದಾರೆ.
ಕಾಲೇಜಿಗೆ ತೆರಳಲು ವಿದ್ಯಾರ್ಥಿ ಗಳಿಗೆ ಬಸ್ ಸೌಕರ್ಯ ಕಲ್ಪಿಸಿಕೊಡುವ ಬಗ್ಗೆ ಸಾರಿಗೆ ನಿಗಮದ ಘಟಕ ನಿಯಂತ್ರಣಾಧಿಕಾರಿಗಳನ್ನು ಭೇಟಿ ಮಾಡಿ ಈಗಾಗಲೇ ಮನವಿ ಪತ್ರ ಸಲ್ಲಿಸಿದ್ದರು ಕೂಡ ಗಮನಹರಿಸಿಲ್ಲ. ಕೂಡಲೇ ಸಾರಿಗೆ ನಿಗಮದ ಅಧಿಕಾರಿಗಳು ಪರಿಶೀಲಿಸಿ ಬಸ್ ಸಂಚಾರ ಸೌಕರ್ಯ ಕಲ್ಪಿಸಿಕೊಡಬೇಕು ಒಂದು ವೇಳೆ ಯಾವುದೇ ಅಹಿತಕರ ಘಟನೆ ಜರುಗಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನೇರಹೊಣೆಗಾರರು,
ಈ ಮನವಿಗೆ ಸ್ಪಂದಿಸಿದೆ ಹೋದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿನಿಯರ ಜೊತೆಗೆ ಸಾರಿಗೆ ಇಲಾಖೆ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಈ ಸಂಧರ್ಭದಲ್ಲಿ: ವಿಶ್ವನಾಥ ಹೆಚ್.ನಾಯಕ ಗೋನಾವರ, ಕುಪೇಂದ್ರನಾಯಕ ಹೆಡಗಿನಾಳ, ವೆಂಕಟೇಶ ನಾಯಕ ಬೂತಲದಿನ್ನಿ, ಮಲ್ಲಯ್ಯ ನಾಯಕ ವಕೀಲರು, ಫಕೀರಪ್ಪ ನಾಯಕ ರಾಮತ್ನಾಳ, ಸೇರಿದಂತೆ ಇತರರು ಇದ್ದರು.

