ರಾಯಚೂರು ಡಿಸೆಂಬರ್ 16(ಕರ್ನಾಟಕ ವಾರ್ತೆ): ರಾಷ್ಟಿಯ ಆರೋಗ್ಯ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ 2025-26ನೇ ಸಾಲಿನಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಸಂಘದ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದಿಂದ ಜಿಲ್ಲೆಯ ಮಾನಸಿಕ ರೋಗಿಗಳಿಗೆ ಮಾತ್ರೆ ಮತ್ತು ಔಷಧಿಗಳನ್ನು ಖರೀದಿಸಲು ಅರ್ಹ ಸರಬರಾಜುದಾರರು ತಮ್ಮ ಏಜೆನ್ಸಿಯ ಜಿ.ಎಸ್.ಟಿ ಕೊಟೇಶನ್‌ಗಳ ಮುಖಾಂತರ ದರಪಟ್ಟಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಏಜೆನ್ಸಿಗಳು ಡಿಸೆಂಬರ್ 23ರೊಳಗಾಗಿ ಜಿ.ಎಸ್.ಟಿ ಕೊಟೇಶನ್‌ಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಲಯದ ರಾಯಚೂರು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಲಯ ವಿಭಾಗ ರಾಯಚೂರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8151896578ಗೆ ಸಂಪರ್ಕಿಸುವAತೆ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಲಯ ವಿಭಾಗದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
