ರಾಯಚೂರು, ಡಿ.16 – ಮುಂದಿನ ತಿಂಗಳು ಜ. 14 ಮತ್ತು 15 ರಂದು ಹಾವೇರಿ ಜಿಲ್ಲೆಯ ಸುಕ್ಷೇತ್ರ ನರಸಿಪುರದ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದಲ್ಲಿ ಅಂಬಿಗರ 10 ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ವಚನ ಗ್ರಂಥ ಮಹಾರಥೋತ್ಸವ ನಡೆಯಲಿದೆ ಎಂದು ಗುರುಪೀಠದ ಶ್ರೀ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಹೇಳಿದರು. ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಶ್ರೀ ಕ್ಷೇತ್ರದಲ್ಲಿ ಎರೆಡು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಅಂಬಿಗರ ಚೌಡಯ್ಯನವರ ಶಿಲಾಮಂಟಪ , ಕಂಚಿನ ಪುತ್ಥಳಿ ಲೋಕಾರ್ಪಣೆ, ಶ್ರೀ ವೇದವ್ಯಾಸರ ಕಲ್ಯಾಣ ಮಂಟಪ ಉದ್ಘಾಟನೆ , ಪ್ರತಿಭಾ ಪುರಸ್ಕಾರ, ಸಾಮೂಹಿಕ ವಿವಾಹ,ರಕ್ತದಾನ, ಗಂಗಾರತಿ, ಪೀಠಾರೋಹಣ ದಶಮಾನೋತ್ಸವ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ರಾಜ್ಯದ ಸಿಎಂ, ಡಿಸಿಎಂ, ಕೇಂದ್ರದ ಸಚಿವರು ಹಾಗೂ ರಾಜ್ಯದ ಸಚಿವರು, ರಾಜಕೀಯ ಧುರೀಣರು ಮತ್ತು ವಿವಿಧೆಡೆಯಿಂದ ಭಕ್ತರು ಆಗಮಿಸಲಿದ್ದಾರೆ ಎಂದರು. ರಾಜ್ಯ ಸರ್ಕಾರ ಗಂಗಾಮತಸ್ಥ ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕೆಂದು ಒತ್ತಾಯಿಸಿದ ಅವರು ಚೌಡಯ್ಯನವರ ಐಕ್ಯ ಸ್ಥಳ ಸಂರಕ್ಷಿಸಿ ಅಭಿವೃದ್ಧಿ ಪಡಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಕೆ.ಶಾಂತಪ್ಪ, ಶರಣಪ್ಪ ಕಲ್ಮಲಾ, ಕಡುಗೋಲು ಆಂಜಿನೇಯ್ಯ, ಕಡುಗೋಲು ಶರಣಪ್ಪ, ಜಂಬಣ್ಣ , ಹೊನ್ನಪ್ಪ ಇನ್ನಿತರರು ಇದ್ದರು.

