ಬೆಳಗಾವಿ : ಡಿ 16 ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ , ಸಣ್ಣ ನೀರಾವರಿ ಸಚಿವರಾದ ಶ್ರೀ ಎನ್.ಎಸ್. ಭೋಸರಾಜು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ, ಸಣ್ಣ ನೀರಾವರಿ ಇಲಾಖೆಯ ಕೆರೆಗಳಿಗೆ ರಚಿಸಿರುವ ಕೆರೆ ಬಳಕೆದಾರರ ಸಂಘಗಳ ಪದಾಧಿಕಾರಿಗಳಿಗೆ ಕೆರೆಗಳ ನಿರ್ವಹಣೆ ಕುರಿತು ಕಾರ್ಯಾಗಾರ ಹಾಗೂ ಕೈಪಿಡಿ ಬಿಡುಗಡೆ ಮತ್ತು ‘ನೀರಿದ್ದರೆ ನಾಳೆ’ ಕರಪತ್ರ ಅನಾವರಣಗೊಳಿಸಲಾಯಿತು.
