ರಾಯಚೂರು : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ವಿಕಲಚೇತನರ ದಿನಾಚರಣೆ–2025ರ ಅಂಗವಾಗಿ ವಿಕಲಚೇತನರಿಗಾಗಿ ಕ್ರೀಡಾಕೂಟಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಮಾನ್ಯ ಅಪರ ಜಿಲ್ಲಾಧಿಕಾರಿಗಳು ಹಾಗೂ “ವಿಶ್ವ ವಿಕಲಚೇತನರ ದಿನಾಚರಣೆ ಸಮಿತಿ” ಅಧ್ಯಕ್ಷರ ಆದೇಶದಂತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ದಿನಾಂಕ 18-12-2025 ರಂದು ಬೆಳಿಗ್ಗೆ 10:00 ಗಂಟೆಗೆ ರಾಯಚೂರು ನಗರದ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಜಿಲ್ಲಾ ವ್ಯಾಪ್ತಿಯ ಎಲ್ಲಾ ವಿಕಲಚೇತನರು ಸದರಿ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

