ಬೆಳಗಾವಿ : ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿಯವರು ಸಿಂಧನೂರು ಹಿರೇ ಹಳ್ಳದ ಬ್ರಿಡ್ಜ್ ಕಾಮಗಾರಿಯು ಕಳಪೆಯಿಂದ ಕೂಡಿದ್ದು, ಸರಿಪಡಿಸುವಂತೆ ಹಾಗೂ ಬಾಕಿ ಉಳಿದಿರುವ ಕಾಮಗಾರಿಯನ್ನು ಪೂರ್ಣ ಗೊಳಿಸುವಂತೆ ಅಧಿವೇಶನದಲ್ಲಿ ಧ್ವನಿ ಎತ್ತಿದ್ದಾರೆ.

ವಿಧಾನ ಪರಿಷತ್ ಸದಸ್ಯರು ಸದನದಲ್ಲಿ ಕೇಳಿದ ಪ್ರಶ್ನೆಗೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳೆ ಅವರು ಉತ್ತರಿಸಿ, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿದ್ದು, ಯಾವುದೇ ಕಳಪೆ ಕಾಮಗಾರಿ ಆಗಿಲ್ಲವೆಂದು ಅಧಿಕಾರಿಗಳು ಹೇಳಿದ್ದಾರೆ. ಮತ್ತೊಮ್ಮೆ ವಿಧಾನ ಪರಿಷತ್ ಸದಸ್ಯರು ಅಧಿಕಾರಿಗಳ ಸಮಕ್ಷಮದಲ್ಲಿ ಪರಿಶೀಲಿಸುವಂತೆ ಜಾರಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರು ಸದನದಲ್ಲಿ ಧ್ವನಿ ಎತ್ತಿದಂತೆ ರಾಷ್ಟ್ರೀಯ ಹೆದ್ದಾರಿ 150 ಎ ರಲ್ಲಿ ಹಿರೇ ಹಳ್ಳಕ್ಕೆ ನಿರ್ಮಿಸಲ್ಪಟ್ಟ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿಲ್ಲ. ಜೊತೆಗೆ ಲೈಟಿಂಗ್ ವ್ಯವಸ್ಥೆ ಸೇರಿದಂತೆ ಇತರೆ ಸೌಕರ್ಯಗಳು ಇರುವುದಿಲ್ಲ ಎಂದು  ಅಧಿವೇಶನದ ಸಭಾಪತಿಯವರಲ್ಲಿ ಮನವಿ ಮಾಡಿಕೊಂಡರು.

Leave a Reply

Your email address will not be published. Required fields are marked *