ರಾಯಚೂರು ಡಿಸೆಂಬರ್ 17 (ಕರ್ನಾಟಕ ವಾರ್ತೆ): ಇಲ್ಲಿನ ಕೃಷಿ ಇಲಾಖೆಯಿಂದ ಸಿರಿಧಾನ್ಯ, ಸಾವಯವ ಉತ್ಪನ್ನಗಳ ಕುರಿತು ಹಾಗೂ ಗ್ರಾಹಕರಿಗೆ ಜಾಗೃತಿ ಮೂಡಿಸಲು ಸಿರಿಧಾನ್ಯಗಳ ಜಾಥಾ ಕಾರ್ಯಕ್ರಮ-2025ರ ಡಿಸೆಂಬರ್ 22ರ ಬೆಳಿಗ್ಗೆ 6ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಜಾಗೃತಿ ನಡಿಗೆಯಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಕೋರಿದ್ದರೆ.
ಜಾಗೃತಿ ನಡಿಗೆವು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದ ಮುಂಭಾಗ ದಿಂದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ, ಜಂಟಿ ಕೃಷಿ ನಿರ್ದೇಶಕರ ಕಚೇರಿ, ಬಸವೇಶ್ವರ ವೃತ್ತ ಮಾರ್ಗವಾಗಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ಆವರಣದವರೆಗೆ ಹಮ್ಮಿಕೊಳ್ಳಲಾಗಿದ್ದು, ಎಲ್ಲರೂ ಭಾಗವಹಿಸಿ ರೈತರಿಗೆ ಮತ್ತು ಗ್ರಾಹಕರಿಗೆ ಉತ್ತೇಜನ ನೀಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಟಕಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *