ಪಶ್ಚಿಮ ವಲಯ ಎಸ್‌ವಿಎಸ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ರಿಚ್ ಎಜುಕೇಷನ್ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಭಾಷಾ ವಿಭಾಗದ ದ್ವಿತೀಯ ತರಗತಿ ವಿದ್ಯಾರ್ಥಿನಿ ಅಲ್ಫಿಯಾ (ತಂದೆ: ಹುಸೇನ್) ಚಾದ್ಮ ವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಗಮನ ಸೆಳೆದರು. ನಾಲ್ಕನೇ ತರಗತಿ ವಿದ್ಯಾರ್ಥಿ ವಿಜಯ್ ಕುಮಾರ್ (ತಂದೆ: ಹನುಮೇಶ್) ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿದರು. ಇನ್ನು ಮೊಹಮ್ಮದ್ ಕದಿರ್ (ತಂದೆ: ಆಲಂ ಬಾಷಾ) ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡರು.
ಸ್ಪರ್ಧೆಗಳಲ್ಲಿ ವಿಜೇತರಾಗಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಅವರ ಸಾಧನೆಗೆ ಕಾರಣರಾದ ಶಾಲೆಯ ಶಿಕ್ಷಕರಿಗೆ ಶಾಲಾ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.

