ರಾಯಚೂರು ಡಿಸೆಂಬರ್ 18 (ಕರ್ನಾಟಕ ವಾರ್ತೆ): ಇಲ್ಲಿನ ಅಂಚೆ ಇಲಾಖೆಯಿಂದ ರಾಯಚೂರು ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗಾಗಿ ನೇರ ಸಂದರ್ಶನಕ್ಕೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಡಿಸೆಂಬರ್ 29ರಂದು ಬೆಳಿಗ್ಗೆ 11ಗಂಟೆಗೆ ರಾಯಚೂರಿನ ಗಂಜ್ ವೃತ್ತದ ಬಳಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು 10ನೇ ತರಗತಿ ಪಾಸಾಗಿರಬೇಕು. ವಯಸು ಕನಿಷ್ಠ 18 ಆಗಿರಬೇಕು. ನಿರುದ್ಯೋಗಿ, ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು, ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡುಬರುವ ಯಾವುದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ನುರಿತ, ಸಂವಹನಾ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು 5 ಸಾವಿರ ರೂ.ಗಳ ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿ ಇಡಬೇಕು. ಆಯ್ಕೆಯಾದ ಪ್ರತಿನಿಧಿಗಳಿಗೆ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮಿಷನ್ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ರಾಯಚೂರು ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *