ರಾಯಚೂರು ಡಿಸೆಂಬರ್ 19 (ಕರ್ನಾಟಕ ವಾರ್ತೆ): ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣ ಪಂಚಾಯಿತಿಯಲ್ಲಿ ತೆರವಾಗಿರುವ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯ ಮತದಾನವು ಡಿಸೆಂಬರ್ 21ರಂದು ನಡೆಯಲ್ಲಿದ್ದು, ಮತದಾನವು ಸೂಸುತ್ರವಾಗಿ, ಶಾಂತಿ ರೀತಿಯಿಂದ ನಡೆಸುವ ಉದ್ದೇಶದಿಂದ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಪಾಲಿಸುವ ಹಿತದೃಷ್ಟಿಯಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ಮದ್ಯ ತಯಾರಿಕಾ ಘಟಕಗಳು, ಸಾಗಾಣಿಕೆ, ಸಂಗ್ರಹಣೆಯನ್ನು ಹಾಗೂ ಮಾರಾಟ ಮಳಿಗೆಗಳನ್ನು ಡಿ.19ರ ಸಂಜೆ 05 ಗಂಟೆಯಿಂದ ಡಿ.21ರ ಮಧ್ಯರಾತ್ರಿ 12 ಗಂಟೆವರೆಗೆ ಬಂದ್ ಇಡುವಂತೆ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಆದೇಶ ಹೊರಡಿಸಿದ್ದಾರೆ.
