ಬೆಂಗಳೂರು : ಕರ್ನಾಟಕದ ಧಾರವಾಡದಲ್ಲಿರುವ ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 5 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳನ್ನು ನೇಮಕಾತಿ (NFSU Recruitment 2025) ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಇಲ್ಲಿದೆ.

ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯ
ಒಟ್ಟು ಹುದ್ದೆಗಳು: 05
ಹುದ್ದೆಗಳ ಹೆಸರು: ಅಸಿಸ್ಟಂಟ್ ಪ್ರೊಫೆಸರ್
ಉದ್ಯೋಗ ಸ್ಥಳ: ಧಾರವಾಡ
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 28

ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 1 ಸಾವಿರ ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ 500 ರೂಪಾಯಿ ಶುಲ್ಕವಿದೆ. ಮಹಿಳೆಯರು, ವಿಶೇಷ ಚೇತನರಿಗೆ ಯಾವುದೇ ಶುಲ್ಕವಿಲ್ಲ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಎಸ್ಸಿ, ಎಂಇ, ಎಂ.ಟೆಕ್, ಪಿಎಚ್.ಡಿ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 90 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ nfsu.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು

Leave a Reply

Your email address will not be published. Required fields are marked *