ಬೆಳಗಾವಿ : ಬೆಳಗಾವಿಯ ವಿಧಾನಮಂಡಲ ಅಧಿವೇಶನವನ್ನು ವೀಕ್ಷಿಸಲು ಆಗಮಿಸಿದ್ದ ಸೊರಬ ವಿಧಾನಸಭಾ ಕ್ಷೇತ್ರದ ಜನತೆಯೊಂದಿಗೆ, ನನ್ನ ಸಂಪುಟ ಸಹೋದ್ಯೋಗಿ ಸನ್ಮಿತ್ರರ ಜೊತೆಗೂಡಿ ಸುವರ್ಣಸೌಧದಲ್ಲಿ ನಮ್ಮ ಇಲಾಖೆಗಳು ಸೊರಬ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಅರ್ಥಪೂರ್ಣ ಸಂವಾದ ನಡೆಸಿದ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಪರಿಷತ್ತಿನ ಸಭಾ ನಾಯಕರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್ ಎಸ್ ಬೋಸುರಾಜು
ಕ್ಷೇತ್ರದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಜಾರಿಗೊಳಿಸಿರುವ ಯೋಜನೆಗಳು, ಅದರ ಪ್ರಯೋಜನಗಳ ಬಗ್ಗೆ ತಿಳಿಸಿ, ನೀರಾವರಿ ಕ್ಷೇತ್ರದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಜನರಿಂದ ಅಹವಾಲುಗಳನ್ನು ಸ್ವೀಕರಿಸಿ, ಶೀಘ್ರವಾಗಿ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಲಾಯಿತು. ಈ ಸಂದರ್ಭದಲ್ಲಿ ಬ್ಯಾಡಗಿವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಬಸವರಾಜ ಶಿವಣ್ಣ , ಶಿರಸಿ–ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಭೀಮಣ್ಣ ನಾಯ್ಕ, ಮಾನ್ಯ ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಶ್ ಬಾನು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

