ರಾಯಚೂರು ಡಿಸೆಂಬರ್ 20 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಇ-ಪೋತಿ ಅಂದೋಲನವನ್ನು ರಾಯಚೂರು ತಾಲೂಕಿನ ವ್ಯಾಪ್ತಿಯಲ್ಲಿ ಡಿಸೆಂಬರ್ 24ರಂದು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಸೂಕ್ತ ದಾಖಲೆಗಳೊಂದಿಗೆ ಅಂದೋಲನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ರಾಯಚೂರು ತಹಶೀಲ್ದಾರ್ ಸುರೇಶ ವರ್ಮ ಅವರು ಕೋರಿದ್ದಾರೆ.
ಅಂದು ಬೆಳಿಗ್ಗೆಯಿಂದ ರಾಯಚೂರಿನ ತಹಶೀಲ್ದಾರ್ ಕಚೇರಿ, ದೇವಸೂಗೂರು, ಕಲಮಲಾ, ಚಂದ್ರಬಂಡ, ಯರಗೇರಾ ಹಾಗೂ ಗಿಲ್ಲೇಸುಗೂರು ನಾಡ ಕಾರ್ಯಲಯದಲ್ಲಿ ಇ-ಪೋತಿ ಅಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
