ರಾಯಚೂರು ಡಿಸೆಂಬರ್ 20 (ಕರ್ನಾಟಕ ವಾರ್ತೆ): ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಡಿಸೆಂಬರ್ 21ರಿಂದ ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಡಿಸೆಂಬರ್ 21ರ ಬೆಳಿಗ್ಗೆ 11 ಗಂಟೆಗೆ ರಸ್ತೆಯ ಮೂಲಕ ಬೆಂಗಳೂರಿನಿಂದ ನಿರ್ಗಮಿಸಿ ಸಂಜೆ 6ಗಂಟೆಗೆ ರಾಯಚೂರಿಗೆ ಆಗಮಿಸುವರು. ಡಿಸೆಂಬರ್ 22ರ ಮಧ್ಯಾಹ್ನ 2 ಗಂಟೆಗೆ ನಗರದ ಕೃಷಿ ವಿಶ್ವವಿದ್ಯಾಲಯದ ಆವರಣದ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಯುವನಿಧಿ ಯೋಜನೆ ಸೇರಿದಂತೆ ಗ್ಯಾರಂಟಿ ಯೋಜನೆಗಳು ವಿದ್ಯಾರ್ಥಿಗಳು ಹಾಗೂ ಸಮಾಜದಲ್ಲಿ ಬೀರಿರುವ ಸಕಾರಾತ್ಮಕ ಪರಿಣಾಮಗಳ ಕುರಿತು ಮುಕ್ತ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಸಂಜೆ 4 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಪ್ರಸ್ತುತದವರೆಗೆ ಸಾಧಿಸಿರುವ ಪ್ರಗತಿಯ ಕುರಿತು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಗ್ಯಾರಂಟಿ ಸಮಿತಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾಗುವವರು.
ಸಂಜೆ 6 ಗಂಟೆಗೆ ಪಕ್ಷದ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿ, ಬೀದರ್ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿಗಳಾದ ಚಂದ್ರಶೇಖರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
