ಸಿರವಾರ ; “ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಮಾಣ ಕಡಿಮೆ ಆಗುತ್ತಿದೆ ಎಂಬ ಆರೋಪಗಳ ನಡುವೆಯೇ ಈ ಬಾರಿ ಸರಕಾರಿ ಕಾಲೇಜುಗಳಲ್ಲಿ ದಾಖಲಾತಿಯ ಪ್ರಮಾಣ ಸರ್ಕಾರವು ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ “ಪ್ರವೇಶಾತಿ ಅಭಿಯಾನ ಎಂಬ ಈ ಕಾರ್ಯಕ್ರಮವನ್ನು ಕೈಗೆತ್ತಿಕೊಂಡಿದೆ. ಈ ಅಭಿಯಾನಕ್ಕೆ ಪಾಲಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಸಿರವಾರ ಸರಕಾರಿ ತು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಹನುಮಂತ ಕೋರಾಪುರ ಹೇಳಿದರು.

ಅವರು ಗುರುವಾರ ರಂದು ಸಿರವಾರ ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ನಡೆದ “ಪ್ರವೇಶಾತಿ ಅಭಿಯಾನ”2026 27 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ‘ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಧ್ಯಾರ್ಥಿಗಳ ಪ್ರವೇಶ ಸಂಖ್ಯೆ ಕಡಿಮೆಯಾಗುತ್ತಿದೆ.
ಅದ್ದರಿಂದ ಸರ್ಕಾರವು ವಿಧ್ಯಾರ್ಥಿಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ನೂತನ “ಪ್ರವೇಶಾತಿ ಅಭಿಯಾನ” ಕಾರ್ಯಕ್ರಮ

ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಪಾಲಕರ ಪಾತ್ರ ಅತಿಮುಖ್ಯ ಪಾತ್ರವನ್ನು ವಹಿಸುತ್ತದೆ.

ಸರಕಾರಿ ಕಾಲೇಜಿನಲ್ಲಿ ಉನ್ನತ ಗುಣಮಟ್ಟದ ಶಿಕ್ಷಣ ತೊರೆಯುತ್ತದೆ. ವಿಧ್ಯಾರ್ಥಿಗಳ ಉತ್ತಮ ಗುಣಮಟ್ಟದ ಫಲಿತಾಂಶವೇ ನಮ್ಮ ಗುರಿಯಾಗಿದೆ.

ನಮ್ಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಮತ್ತು ಬಿ.ಸಿ.ಎ ತರಗತಿಗಳಿಗೆ ಉನ್ನತ ಗುಣಮಟ್ಟದ ಉಪನ್ಯಾಸಕರನ್ನು ಹೊಂದಿದ್ದು, ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಭ್ಯವಿರುವ ವಿವಿಧ ಕೋರ್ಸ್‌ಗಳ ಲಭ್ಯವಿದೆ. ನಮ್ಮ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿಯನ್ನು ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಹನುಮಂತ ಚನ್ನೂರ್, ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಸುಭಾನ್ ಸಾಬ್.ಎಸ್, ಮುತ್ತಪ್ಪ, ರಾಜಶೇಖರ ಎಂ ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕರಾದ ಫರೀದ್ ಹಾಗೂ ಜಯಪ್ಪ ಪದವಿ ಕಾಲೇಜಿನ ಎಸ್.ಡಿ.ಎ ಬಸವರಾಜ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *