ಮಾನ್ವಿ :ಪಲ್ಸ್ ಪೋಲಿಯೊ ಲಸಿಕೆ ಅಭಿಯಾನದಡಿ ಡಿ.21 ರಿಂದ 24ರವರೆಗೆ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕೆಂದು ಎಂದು ಶಾಲೆಯ ಮುಖ್ಯ ಶಿಕ್ಷಕ ಗುಂಡಯ್ಯ ನಾಯಕ ಅವರು ತಿಳಿಸಿದರು.

ಅವರಿಂದು ತಾಲೂಕಿನ ಪೋತ್ನಾಳ ಗ್ರಾಮದ ಜನತಾ ಕಾಲೊನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಜಾಗೃತಿ ಕುರಿತು ಮಾತನಾಡಿದರು.

ಪ್ರಸಕ್ತ ಸಾಲಿನ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಿಯೋಜನಗೊಂಡ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ತಮಗೆ ವಹಿಸಿದ ಕೆಲಸ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.

ಲಸಿಕೆ ಜಾಗೃತಿ:ಗ್ರಾಮದ ವಿವಿಧ ಪ್ರದೇಶ ದಲ್ಲಿ ತಮ್ಮ ವ್ಯಾಪ್ತಿಯಲ್ಲಿನ 5 ವರ್ಷದೊ ಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸುವ ಕುರಿತು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಸಹ ಶಿಕ್ಷಕಿ ಎಂ, ಗೀತಾ,ಚಾಯರಾಣಿ, ಅತಿಥಿ ಶಿಕ್ಷಕಿಯರಾದ ರೇಖಾ, ಗಂಗಮ್ಮ,ಅಂಗನವಾಡಿ ಟೀಚರ್ ಲಕ್ಷ್ಮೀ , ಆಶಾಕಾರ್ಯಕರ್ತೆ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *