ಮಾನ್ವಿ : ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಶಾಲೆ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ರಾಯಚೂರು ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಹಪಠ್ಯ ಚುಟುವಟಿಕೆ ಸ್ಪರ್ಧೆಯಲ್ಲಿ ತಾಲೂಕಿನ ಮುಷ್ಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಝರೀನಾ ಅವರು ಗಣಿತ ವಿಷಯಕ್ಕೆ ಸಂಬಂಧಿಸಿದ ಕಲಿಕೋಪಕರಣ ಸಿದ್ಧಪಡಿಸುವ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

