ಸಿಂಧನೂರು ತಾಲೂಕಿನ ಹೊಸಳ್ಳಿ ಇಜೆ ಕ್ಯಾಂಪ್ ಶ್ರೀ ರಾಮಮಂದಿರ ಹತ್ತಿರ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ರವಿವಾರ ಬೆಳಿಗ್ಗೆ ಮಗುವಿಗೆ ಪೋಲಿಯೋ ಲಸಿಕೆ ಹಾಕಿ ಚಾಲನೆ ನೀಡಲಾಯಿತು.
ಈ ಸಮಯದಲ್ಲಿ ಮಾತನಾಡಿದ ಅಕ್ಷಯ ಆಹಾರ ಜೋಳಿಗೆ ಸೇವಾ ಟ್ರಸ್ಟ್ ಕಾರ್ಯದರ್ಶಿ ಅಶೋಕ್ ನಲ್ಲಾ ಮಾತನಾಡಿ, ಇಂದಿನಿಂದ 4ದಿನಗಳವರೆಗೆ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಆರಂಭವಾಗಿದೆ. ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಪೊಷಕರಲ್ಲಿ ಮನವಿ ಮಾಡುತ್ತಿದ್ದೇನೆ ಎಂದರು.
ಈ ಸಮಯದಲ್ಲಿ ಅಂಗನವಾಡಿ ಸಿಬ್ಬಂದಿಗಳು ಇದ್ದರು

