ಕೊಡೆಕಲ್ಲ: ಗ್ರಾಮದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಆರ್.ಟಿ.ಜೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ಚಿತ್ರಕಲಾ ಸ್ಪರ್ದೆಯಲ್ಲಿ ಕೊಡೆಕಲ್ ಪ್ರಾಥಮಿಕ ಆರೋಗ್ಯ ಕೇಂದ್ರಲ್ಲಿ ಆರೋಗ್ಯ ನಿರಕ್ಷಣಾಧಿಕಾರಿಗಳಾದ ಶ್ರೀರಾಮಚಂದ್ರ ಮುಚ್ಚಟ್ಟಿರವರ ಕಿರಿಯ ಮಗ ಎಂಟನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಸಂಗಮೇಶ ಮುಚ್ಚಟ್ಟಿ ಅವರು ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ಗುರುಗಳಾದ ಶ್ರೀನಿವಾಸ್ ಮಡ್ಡಿರವರು ಮಾತನಾಡಿ ಬೆಳೆಯುತ್ತಿರುವ ಇಂತಹ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಇಂದು ನಾವು ಗುರುತಿಸುವ ಅವಶ್ಯಕತೆ ಇದೆ. ಇವನು ತನ್ನ ಈ ಉತ್ತಮ ಸಾಧನೆಯಿಂದ ನಮ್ಮ ಶಾಲೆಗೆ ಕೀರ್ತಿ ತಂದಿದ್ದಾನೆ. ನಮ್ಮ ಶಾಲೆಯಲ್ಲಿ ಇಂಥಹ ವಿದ್ಯಾರ್ಥಿಗಳನ್ನು ಗುರುತಿಸಿ ಅವರವರ ಪ್ರತಿಭೆಗಳಿಗೆ ತಕ್ಕಂತೆ ಶೈಕ್ಷಣಿಕ ಸ್ಪರ್ಧೆಗಳು ಪ್ರತಿ ವರ್ಷ ಏರ್ಪಾಡು ಮಾಡುತ್ತೇವೆ ಎಂದರು. ವಿದ್ಯಾರ್ಥಿ ಸಂಗಮೇಶ ಮುಚ್ಚಟ್ಟಿ ರವರ ಈ ಸಾಧನೆಯ ಹಿಂದೆ ನಮ್ಮ ಶಾಲೆಯ ಚಿತ್ರಕಲಾ ಶಿಕ್ಷಕರಾದ ಶ್ರೀ ಮಂಜುನಾಥ ಅಂಕಲಗಿ ರವರ ತರಬೇತಿಗೆ ತಕ್ಕ ಫಲ ಲಭಿಸಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಆರ್ ಟಿ ಜೆ ಆಂಗ್ಲ ಮಾಧ್ಯಮ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗದವರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲಕರು ಉಪಸ್ಥಿರದಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರ ಕೊಡೇಕಲ್ಲಿನ ಎಲ್ಲಾ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಯ ಸಾಧನೆ ಕಂಡು ಹರ್ಷ ವ್ಯಕ್ತಪಡಿಸಿದರು.

