ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿಯೋಜನೆಗಳನ್ನು ಜಾರಿಗೆ ತಂದಿದೆ- ಶಾಸಕ ಆರ್. ಬಸನಗೌಡ
ಮಸ್ಕಿ : ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡು ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜಾರಿಗೆ ತಂದಿದೆ ಇದರಿಂದ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿದೆ ಎಂದು ಖಾದಿ ಗ್ರಾಮದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್. ಬಸನಗೌಡ ತುರ್ವಿಹಾಳ ಹೇಳಿದರು.
ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕನ್ನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯತ್ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಬಿಜೆಪಿ ಸರ್ಕಾರ ರಾಜ್ಯವನ್ನು ದಿವಾಳಿ ಹಂತಕ್ಕೆ ತಂದಿತ್ತು. ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಶಾಸಕರನ್ನು ಖರೀದಿಸಿ ಅಗತ್ಯ ವಸ್ತುಗಳ ಬೆಲೆ ಏರಿಸಿ ಜನರಿಗೆ ತೊಂದರೆ ನೀಡಿದರು. ಈಗ ಕೆಲವರು ಸುಮ್ನೆ ಮೋದಿ ಮೋದಿ ಅಂತಾರೆ ಮುಂದಿನ ದಿನಗಳಲ್ಲಿ ಬಿಜೆಪಿ ಇರಲ್ಲ ಎಂದರು. ಅದಾನಿ ಅಂಬಾನಿ ಅವರಿಗೆ ಮಾತ್ರ ಮೋದಿ ಅನುಕೂಲ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಚುನಾವಣೆ ವೇಳೆ ನೀಡಿದ ಭರವಸೆಯಂತೆ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಕ್ಷೇತ್ರದಲ್ಲಿ 22 ಕ್ಕೂ ಅಧಿಕ ಕಡೆ ಕೆಎಂಎಫ್ ಆಶ್ರಯದಲ್ಲಿ ಸ್ವ ಸಹಾಯ ಒಕ್ಕೂಟಗಳ ಕ್ಷೀರ ಸಂಜೀವಿನಿ ಆರಂಭಿಸಲಾಗಿದೆ. ರೈತರ ಬೇಡಿಕೆಯಂತೆ ಕನ್ನಾಳದಲ್ಲಿ ಪಶು ಆಸ್ಪತ್ರೆ ಆರಂಭಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಐದು ಸಾವಿರ ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳು ಶಾಶ್ವತವಾಗಿರಲಿವೆ
ಮಸ್ಕಿ ಕ್ಷೆತ್ರದಲ್ಲಿ ಅರೋಗ್ಯ ಹಾಗೂ ಶಿಕ್ಷಣ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.
ನಂತರ ಗ್ಯಾರಂಟಿ ಯೋಜನೆಗಳ ಸಮಿತಿ ತಾಲೂಕು ಅಧ್ಯಕ್ಷ ಮಹಿಬೂಬಸಾಬ್ ಮುದ್ದಾಪುರು ಮಾತನಾಡಿ ಪಂಚ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಅಭಿವೃದ್ಧಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಮಹಿಬೂಬ್ ಸಾಬ್ ಮುದ್ದಾಪುರ, ಕನ್ನಾಳ ಗ್ರಾಪಂ ಅಧ್ಯಕ್ಷೆ ಸರಸ್ವತಿ, ಗ್ರಾಪಂ ಉಪಾಧ್ಯಕ್ಷರಾದ ಹನುಮಂತ, ಜೆಸ್ಕಾಂ ಎಇಇ ವೆಂಕಟೇಶ್, ಆಹಾರ ಇಲಾಖೆಯ ರಾಮಕೃಷ್ಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ರಾಜೇಶ್ವರಿ, ಕೆಡಿಪಿ ಸದಸ್ಯರಾದ ಬಸವಂತಪ್ಪ ಮಟ್ಟೂರು, ಸಮಿತಿಯ ಸದಸ್ಯರಾದ ರವಿ ಪಾಟೀಲ್, ಚೆನ್ನಬಸವ, ಪೌಲ್ ರಾಜ್, ಶಂಕರಗೌಡ, ನಾಗರತ್ನ ಕಟ್ಟಿಮನೆ, ಸುರೇಶ್ ಕಜ್ಜಿ, ಬಾಲರಾಜ್, ಕನ್ನಾಳ ಗ್ರಾಪಂ ಪಿಡಿಒ ಕೃಷ್ಣ ಹುನಗುಂದ, ತಲೇಖಾನ್ ಗ್ರಾಪಂ ಪಿಡಿಒ ಜ್ಯೋತಿಬಾಯಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯ ವಲಯ ಮೇಲ್ವಿಚಾರಕರಾದ ಮೌನೇಶ್, ಪ್ರಕಾಶ್, ನರೇಗಾ ಯೋಜನೆಯ ತಾಂತ್ರಿಕ ಸಂಯೋಜಕರಾದ ಅಶೋಕ್, ತಾಂತ್ರಿಕ ಸಹಾಯಕ ಅಭಿಯಂತರರಾದ ಪಂಪಣ್ಣ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು, ಗ್ರಾಪಂ ಸಿಬ್ಬಂದಿ ಇದ್ದರು. ಮಸ್ಕಿ ತಾಪಂ ಸಹಾಯಕ ನಿರ್ದೇಶಕರಾದ (ಪಂ.ರಾ) ಸೋಮನಗೌಡ ಪಾಟೀಲ್ ನಿರೂಪಿಸಿದರು. ಆಶಾ ಕಾರ್ಯಕರ್ತೆ ಮರಿಯಮ್ಮ ಪ್ರಾರ್ಥಿಸಿದರು.

