ಲಿಂಗಸಗೂರು : ಡಿ 22
2026–27ನೇ ಸಾಲಿನ ತಾಲೂಕು ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಗೆ ಸಿದ್ಧಪಡಿಸಿರುವ ₹390.20 ಕೋಟಿ ಅನುದಾನ ಸಾಕಾಗುವುದಿಲ್ಲ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕನಿಷ್ಠ ರೂ. 500 ಕೋಟಿ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಬೇಕು ಎಂದು ಶಾಸಕ ಮಾನಪ್ಪ ವಜ್ಜಲ್ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕ ಪಂಚಾಯತ್ ಸಭಾಭವನದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, SCP–TSP ಯೋಜನೆಗಳಡಿ ಪ್ರತಿಯೊಂದು ಇಲಾಖೆ ತಮ್ಮ ವ್ಯಾಪ್ತಿಯಲ್ಲಿನ ಸಮಸ್ಯೆ ಹಾಗೂ ಅಭಿವೃದ್ಧಿ ಅಗತ್ಯಗಳನ್ನು ಗುರುತಿಸಿ ಹೆಚ್ಚುವರಿ ಅನುದಾನದ ಬೇಡಿಕೆ ಸಲ್ಲಿಸಬೇಕೆಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಬಯ್ಯಾಪುರ ಮಾತನಾಡಿ, ತಾಲೂಕಿನಲ್ಲಿ ಜಾನುವಾರುಗಳು ಹಾಗೂ ಕುರಿ-ಮೇಕೆಗಳ ಸಾವಿನ ಕುರಿತು ಅಧಿಕಾರಿಗಳಿಗೆ ಸರಿಯಾಗಿ ಮಾಹಿತಿ ಇಲ್ಲದಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ತಕ್ಷಣ ವಿವರ ನೀಡದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಈ ಸಂದರ್ಭದಲ್ಲಿ
ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಎಪಿಎಂಸಿ ಅಧ್ಯಕ್ಷ ಅಮರೇಶ್ ಹೆಸರೂರ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಸಣ್ಣ ಮೇಟಿ ಈಚನಾಳ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

