ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಶನಿವಾರ ಸಂಜೆ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನಿಸಲಾಯಿತು. ನಗರದ ತಾಲೂಕು ಪಂಚಾಯತಿ ಆವರಣದಲ್ಲಿ ಸರ್ಕಾರಿ ನೌಕರರ ಸಂಘದ ಕಛೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಹಾಗೂ ತಾಲೂಕಾ ಘಟಕದ ಪದಾಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಿದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಪ್ರಧಾನ ಕಾರ್ಯದರ್ಶಿ ಆನಂದ ಮೋಹನ, ರಾಜ್ಯ ಪರಿಷತ್ ಸದಸ್ಯ ದೊಡ್ಡಲಿಂಗಪ್ಪ, ತಾಲೂಕಾ ಖಜಾಂಚಿ ವೀರನಗೌಡ, ಉಪಾಧ್ಯಕ್ಷ ಶಿವಕುಮಾರ, ಸಂಘಟನಾ ಕಾರ್ಯದರ್ಶಿಗಳಾದ ಮಹ್ಮದ್ ಮಾರುಫ್, ಬಸವರಾಜ ಯಲಬುರ್ಗಿ, ಹನುಮಂತ, ಸಹ ಕಾರ್ಯದರ್ಶಿ ಚನ್ನಬಸವ, ಹುಸೇನ ಸಾಬ್, ಜಿಲ್ಲಾ ಉಪಾಧ್ಯಕ್ಷ ಭರತ್ ಕುಮಾರ, ಸಂಘಟನಾ ಕಾರ್ಯದರ್ಶಿ ಶ್ಯಾಮೀದ್ ಸೇರಿದಂತೆ ಅನೇಕರು ಇದ್ದರು.

