ಗ್ರಾಮ ಪಂಚಾಯತ್ ಆರ್.ಎಚ್. ನಂಬರ್–1 ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಲ್ಲಿ ನಾಯಕತ್ವ ಗುಣಗಳು, ಹಕ್ಕುಗಳ ಅರಿವು ಹಾಗೂ ನಾಗರಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ಮಕ್ಕಳ ಗ್ರಾಮ ಸಭೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರೆಹಮತ್ ಪಾಷಾ ಅವರು ವಹಿಸಿದ್ದರು. ಅವರು ಮಾತನಾಡಿ, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಗುರುಗಳಾದ ಶ್ರೀ ಈರಣ್ಣ ಕಮ್ಮಾರ್, ಮಕ್ಕಳ ಗ್ರಾಮ ಸಭೆಯ ವಿಶೇಷ ಆಹ್ವಾನಿತರಾಗಿ ಮಕ್ಕಳ ಪ್ರತಿನಿಧಿಯಾಗಿ ಕುಮಾರಿ ಅಕ್ಷತಾ ವೇದಿಕೆಯನ್ನು ಅಲಂಕರಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಗುರುಗಳು ಉಮೇಶ್ ಸಾಹೇಬ್ ಮಾತನಾಡಿ ಅವರು ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಮಹತ್ವ, ಶಿಸ್ತು, ಸ್ವಚ್ಛತೆ, ಆರೋಗ್ಯ, ನಿಯಮಿತ ಹಾಜರಾತಿ ಹಾಗೂ ಮೌಲ್ಯಾಧಾರಿತ ಜೀವನದ ಅಗತ್ಯತೆಯ ಕುರಿತು ವಿವರವಾಗಿ ತಿಳಿಸಿದರು. ಮಕ್ಕಳ ಅಭಿಪ್ರಾಯಗಳಿಗೆ ಗೌರವ ನೀಡುವುದು ಹಾಗೂ ಶಾಲೆ–ಸಮುದಾಯ–ಗ್ರಾಮ ಪಂಚಾಯತ್ ನಡುವಿನ ಸಹಕಾರ ಅತ್ಯಂತ ಅಗತ್ಯವೆಂದು ಅವರು ತಿಳಿಸಿದರು. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶಾಲೆ ಸದಾ ಬದ್ಧವಾಗಿದ್ದು, ಮಕ್ಕಳ ಗ್ರಾಮ ಸಭೆಗಳು ಮಕ್ಕಳಲ್ಲಿ ಆತ್ಮವಿಶ್ವಾಸ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಅವರು ಮಾತನಾಡಿ, ಮಕ್ಕಳ ಕಲ್ಯಾಣ ಹಾಗೂ ಶಿಕ್ಷಣ ಸಂಬಂಧಿತ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. ಸರ್ಕಾರದ ಮಕ್ಕಳ ಕಲ್ಯಾಣ ಯೋಜನೆಗಳು, ಶಾಲಾ ಸೌಲಭ್ಯಗಳು ಹಾಗೂ ಸಮುದಾಯದ ಪಾತ್ರದ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಮಕ್ಕಳಿಂದ ಶಿಕ್ಷಣ, ಶಾಲಾ ಮೂಲಸೌಕರ್ಯ, ಸ್ವಚ್ಛತೆ, ಆಟದ ಮೈದಾನ, ಆರೋಗ್ಯ ಹಾಗೂ ಸುರಕ್ಷತೆ ಕುರಿತು ಅನೇಕ ಉಪಯುಕ್ತ ಸಲಹೆಗಳು ಲಭಿಸಿವೆ. ಈ ಸಲಹೆಗಳನ್ನು ಮುಂದಿನ ಗ್ರಾಮ ಪಂಚಾಯತ್ ಸಭೆಯಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧ್ಯಕ್ಷರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಂಟಿಯಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಎಸ್‌ಡಿಎಂಸಿ ನಾಮ ನಿರ್ದೇಶಕ ಸದಸ್ಯರಾದ ಲಾಜರ್ ಸಿರಿಲ್ ಕಾರ್ಯಕ್ರಮದ ಕುರಿತು ಮಾತನಾಡಿ ಮಕ್ಕಳ ಸಕ್ರಿಯ ಪಾಲ್ಗೊಳ್ಳುವಿಕೆ ಮಕ್ಕಳ ಗ್ರಾಮ ಸಭೆ ಮಕ್ಕಳಲ್ಲಿ ಜವಾಬ್ದಾರಿ, ಆತ್ಮವಿಶ್ವಾಸ ಹಾಗೂ ನಾಗರಿಕ ಅರಿವನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು
ಕಾರ್ಯಕ್ರಮದಲ್ಲಿ ಶಾಲಾ ಪ್ರಭಾರಿ ಮುಖ್ಯ ಗುರುಗಳಾದ ಶ್ರೀ ಉಮೇದ್ ಸಾಹೇಬ್ , ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ವಿಶ್ವನಾಥ್, ನಾಮನಿರ್ದೇಶಿತ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಎಸ್.ಡಿ.ಎಂ.ಸಿ ಸದಸ್ಯರಾದ ಶ್ರೀ ಲಾಜರ್ ಸಿರಿಲ್ ಅವರುಗಳು ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕರಾದ ಶ್ರೀ ಅರುಣ್ ಕುಮಾರ್ ಎಂ ಹಾಗೂ ಶ್ರೀ ಉಮೇದ್ ಸಾಹೇಬ್ ಅವರು ಸಮರ್ಥವಾಗಿ ನಿರ್ವಹಿಸಿದರು…

