ತಾಳಿಕೋಟಿ : ತಾಲೂಕಿನ ಚಬನೂರ ಗ್ರಾಮದಲ್ಲಿ ಸಿದ್ಧಿ ಪುರುಷ ಲಿಂಗೈಕ್ಯ ರಾಮಲಿಂಗೇಶ್ವರ ನೂತನ ಮಠ ಹಾಗೂ ಕಲ್ಯಾಣ ಮಂಟಪ ಉದ್ಘಾಟನಾ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಜ್ಯೋತಿಷ್ಯ ರತ್ನ ಪರಮಪೂಜ್ಯ ರಾಮಲಿಂಗಯ್ಯ ಮಹಾಸ್ವಾಮಿಗಳಿಗೆ ಮುಖಂಡ ಬಸನಗೌಡ ಪಾಟೀಲ ಯಡಿಯಾಪೂರ ಅವರು ಗೌರವ ಸಮರ್ಪಣೆ ಸಲ್ಲಿಸಿದರು. ನಾವದಗಿ ಬ್ರಹನ್ಮಠದ ಷ.ಬ್ರ. ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರು, ಕೊಡೆಕಲ್ಲದ ಶಿವಕುಮಾರ ಮಹಾಸ್ವಾಮಿಗಳು, ದೇವರ ಹಿಪ್ಪರಗಿ ಪರದೇಶಿ ಮಠದ ಶಿವಯೋಗಿ ಶಿವಾಚಾರ್ಯರು ಹಾಗೂ ಹಲವಾರು ಮುಖಂಡರು ಇದ್ದರು.

