ಮೆದಕಿನಾಳ ಪ್ರಾಥಮಿಕ ಆರೋಗ್ಯ ಕೇಂದ್ರ, ಜಕ್ಕೇರಮಡು ಆರೋಗ್ಯ ಉಪ ಕೇಂದ್ರ, ಮಟ್ಟೂರು ಗ್ರಾಮದ ಸರ್ಕಾರಿ ಆಯುರ್ವೇದ ಕೇಂದ್ರದ ವೈದ್ಯಾಧಿಕಾರಿಗಳು, ಸಿಬ್ಬಂದಿ ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಿದರು. ರಕ್ತದೊತ್ತಡ, ಸಕ್ಕರೆ ಕಾಯಿಲೆ ತಪಾಸಣೆ ನಡೆಸಿ ಉಚಿತವಾಗಿ ಔಷಧ ವಿತರಿಸಿದರು. ಡಾ.ಮಹೇಂದ್ರ ಪಾಟೀಲ್, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಕಿರಣ್, ಬಸವರಾಜ್, ಸಮುದಾಯ ಆರೋಗ್ಯ ಅಧಿಕಾರಿಗಳಾದ ಸುರೇಶ್, ಅಶೋಕ್, ಮೀನಾಕ್ಷಿ, ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿ ವಿಜಯಲಕ್ಷ್ಮೀ, ಮಟ್ಟೂರು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ಡಾ. ಡಿ.ಎಚ್.ಹುಲ್ಲೂರು, ಗೊರೇಬಾಳ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ಡಾ. ಹೀರಾಬಾಯಿ, ಲಿಂಗಮ್ಮ, ಗಾಯತ್ರಿ, ನಂದಕಿಶೋರ್, ಶ್ರೀನಿವಾಸ್ ಸೇರಿದಂತೆ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.

