ರಾಯಚೂರು ಡಿಸೆಂಬರ್ 23 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಆಹಾರ, ನಾಗರಿಕ ಸರಬರಾಜು ಹಾಘೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025ರ ಕಾರ್ಯಕ್ರಮವನ್ನು ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಡಿಸೆಂಬರ್ 24ರ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ
ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಕೆ.ವಿ.ಸುರೇಂದ್ರ ಕುಮಾರ್ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಗೌರವಾನ್ವಿತ ಹಿರಿಯ ಶ್ರೇಣಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಪ್ರಭುದೇವ್, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ, ವಕೀಲರಾದ ಗೌರೀಶ್ ಸೇರಿದಂತೆ ಇತರರು ಭಾಗಿಯಾಗಲಿದ್ದಾರೆ ಎಂದು ಆಹಾರ, ನಾಗರಿಕ ಸರಬರಾಜು ಹಾಘೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ನಜೀರ್ ಅಹಮದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
