ರಾಯಚೂರು ಡಿಸೆಂಬರ್ 23 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ ಮತ್ತು ಶುಲ್ಕ ವಿನಾಯಿತಿ ಯೋಜನೆಗಳ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು 2026ರ ಜನವರಿ 31ರವರೆಗೆ ವಿಸ್ತರಣೆ ಮಾಡಲಾಗಿದೆ.
ಪಿ.ಯು.ಸಿ ಮತ್ತು ಸಾಮಾನ್ಯ ಪದವಿ ಕೋರ್ಸುಗಳನ್ನು ಹೊರತುಪಡಿಸಿ ಉಳಿದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2025-26 ನೇ ಸಾಲಿಗೆ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಕಾರ್ಯಕ್ರಮಗಳ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು 31.01.2026 ರವರೆಗೆ ಪೋಷಕರು/ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕೆ ಸಂಸ್ಥೆಗಳ ಮನವಿಯ ಮೇರೆಗೆ ವಿಸ್ತರಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ: http://ssp.postmatric.karnataka.gov.in/ ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ಬೇಟಿ ನೀಡಬೇಕಾದ ವೆಬ್‌ಸೈಟ್ ವಿಳಾಸ: http://bcwd.karnataka.gov.in ಇಲಾಖೆ ಸಹಾಯವಾಣಿ ದೂರವಾಣಿ ಸಂಖ್ಯೆ: 8050770004 ಅಥವಾ ಇಮೇಲ್: bcwdhelpline@gmail.com ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಇ-ಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ: 1902ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
