ರಾಯಚೂರು ಡಿಸೆಂಬರ್ 24 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ವಡವಟ್ಟಿ ವಿದ್ಯುತ್ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಡಿಸೆಂಬರ್ 26ರ ಬೆಳಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆವರೆಗೆ ಗ್ರಾಮೀಣ ವಡವಟ್ಟಿ ಉಪ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *