ಸಿಂಧನೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಅಭಿವೃದ್ಧಿ ವಿಚಾರವಾಗಿ ಮಾನ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಸನ್ಮಾನ್ಯ ದಿನೇಶ್ ಗುಂಡೂರಾವ್ ವರನ್ನು ನಮ್ಮೆಲ್ಲರ ನೆಚ್ಚಿನ ನಾಯಕರು, ಕರ್ನಾಟಕ ವಿಧಾನಪರಿಷತ್ ಶಾಸಕರಾದ ಶ್ರೀ ಬಸನಗೌಡ ಬಾದರ್ಲಿ ಅವರು ಭೇಟಿ ಮಾಡಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಸಿ ಟಿ ಸ್ಕ್ಯಾನ್, ಎಮ್ ಆರ್ ಐ ಮತ್ತು ಡಯಲಿಸಸ್ ಸ್ಥಾಪಿಸುವ ಬಗ್ಗೆ ಚರ್ಚಿಸಿದರು. ಈ ವೇಳೆ ಮಸ್ಕಿ ಕ್ಷೇತ್ರದ ಶಾಸಕರಾದ ಶ್ರೀ ಆರ್. ಬಸನಗೌಡ ತುರ್ವಿಹಾಳ, ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಶ್ರೀ ರವಿ ಬೋಸರಾಜು ಉಪಸ್ಥಿತರಿದ್ದರು

