ಕಾಂಗ್ರೆಸ್ 141ನೇ ಸಂಸ್ಥಾಪನಾ ದಿನಾಚರಣೆ
ಬಳ್ಳಾರಿ : ಡಿ 28 ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನ ದಿನಾಚರಣೆಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಆಚರಿಸಲಾಯಿತು.
ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಲ್ಲಂ ಪ್ರಶಾಂತ್ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.
ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಪಿ. ಗಾದೆಪ್ಪ ಅವರು ಅತಿಥಿಗಳಾಗಿ ಪಾಲ್ಗೊಂಡು, ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿರುವ ಅಲನ್ ಆಕ್ಟೇವಿಯನ್ ಹೂಮ್ ಮತ್ತು ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಗಳಿಗೆ ಪುಷ್ಪಗಳನ್ನು ಸಮರ್ಪಿಸಲಾಯಿತು.
ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.

