ರಾಯಚೂರು ನವೆಂಬರ್ 19 (ಕರ್ನಾಟಕ ವಾರ್ತೆ): ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿ ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟದ ಭಾಗದ 08 ಜಿಲ್ಲೆಗಳಲ್ಲಿ ಪ್ರವಾಸಿ ತಾಣಗಳನ್ನು ಉತ್ತೇಜಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಒಂದು ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಆಹ್ವಾನಿಸಲಾಗಿದ್ದು, ಅರ್ಜಿಯ ಅವಧಿಯನ್ನು ನವೆಂಬರ್ 29ರವರೆಗೆ ವಿಸ್ತರಿಸಲಾಗಿದೆ.
ಅಭ್ಯರ್ಥಿಗಳಿಗೆ ಒಂದು ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿ ಹಾಗೂ ಈ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಜಾಕೆಟ್ ಹಾಗೂ ಒಂದು ಜೊತೆ ಸ್ಪೋರ್ಟ್ಸ್ ಶೂ ಒದಗಿಸುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ರಾಯಚೂರು ಜಿಲ್ಲೆಗೆ ಸಂಬಂಧಿಸಿದಂತೆಪರಿಶಿಷ್ಟ ಜಾತಿ-11 ಹಾಗೂ ಪಂಗಡದ-09 ಗುರಿ ನಿಗದಿಪಡಿಸಲಾಗಿದ್ದು, ಪರಿಶಿಷ್ಟ ಜಾತಿ-10 ಹಾಗೂ ಪರಿಶಿಷ್ಟ ಪಂಗಡ-08 ಗುರಿಗಳು ಬಾಕಿ ಉಳಿದಿರುತ್ತವೆ.
ಅಭ್ಯರ್ಥಿಗಳಿಗೆ ಕನಿಷ್ಠ 21 ರಿಂದ ಗರಿಷ್ಠ 48 ವಯೋಮಿತಿಯೊಳಗಿರಬೇಕು. ಆಸಕ್ತರು, ಅರ್ಜಿಗಳನ್ನು ಕಚೇರಿಯಿಂದ ಪಡೆದು ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತಾ ದಾಖಲೆಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ದಾಖಲೆಗಳನ್ನು ಸ್ವಯಂ ದೃಢೀಕರಿಸಿ ನವೆಂಬರ್ 29ರೊಳಗಾಗಿ ಸಲ್ಲಿಸಬಹುದಾಗಿದೆ. ಅವಧಿ ಮುಂಗಿದ ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ, ಗಣೇಶ ಗುಡಿ ಹತ್ತಿರ, ನಿಜಲಿಂಗಪ್ಪ ಕಾಲೋನಿ, ರಾಯಚೂರು ಜಿಲ್ಲೆ-584101, ದೂರವಾಣಿ ಸಂಖ್ಯೆ:08532200677, ಕಚೇರಿ ಸಿಬ್ಬಂದಿ ದೂರವಾಣಿ ಸಂಖ್ಯೆ; 9686203534ಗೆ ಕಚೇರಿಗೆ ಕರ್ತವ್ಯದ ವೇಳೆಯಲ್ಲಿ ಸಂಪರ್ಕ ಮಾಡಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ನಜೀರ ಅಹ್ಮದ್ ಕನವಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
