ಸಿಂಧನೂರು: ಡಿ 29 ನಾಡಿನ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆಯನ್ನು ಸನ್ ರೈಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಸಿಂಧನೂರಿನಲ್ಲಿ ಭಕ್ತಿಭಾವದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸನ್ ರೈಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಅಧ್ಯಕ್ಷರಾದ ಶ್ರೀ ಇರ್ಫಾನ್ ಕೆ ಅತ್ತಾರ್ ಅವರು ವಹಿಸಿದ್ದರು. ಅವರು ಮಾತನಾಡಿ, ಕುವೆಂಪು ಅವರು ಸಾರಿದ ಮಾನವೀಯತೆ, ಸಮಾನತೆ, ನಾಡು–ನುಡಿ ಪ್ರೀತಿ ಮತ್ತು ವಿಶ್ವಮಾನವ ಸಂದೇಶಗಳು ಇಂದಿನ ವಿದ್ಯಾರ್ಥಿ ಸಮುದಾಯಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು.
ಸನ್ ರೈಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್‌ನ ಕಾರ್ಯದರ್ಶಿಗಳು ಹಾಗೂ ಪ್ರಾಚಾರ್ಯರಾದ ಲಾಜರ್ ಸಿರಿಲ್ ಅವರು ಮಾತನಾಡಿ, ಕುವೆಂಪು ಅವರ ಸಾಹಿತ್ಯ ಮತ್ತು ಚಿಂತನೆಗಳು ಯುವಜನರಲ್ಲಿ ಮೌಲ್ಯಾಧಾರಿತ ಬದುಕು, ಸಾಮಾಜಿಕ ಜವಾಬ್ದಾರಿ ಹಾಗೂ ವೈಚಾರಿಕ ಚೈತನ್ಯವನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಕುವೆಂಪು ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿಯ ಅಧಿಕಾರಿಗಳಾದಂತ ಶ್ರೀ ನಿಖಿಲ್ ಹೊಸಮನಿ ಎಂಡೊಮೊಲಜಿಸ್ಟ್ ರೋಗವಾಹಕ ಆಶ್ರಿತ ಕಾರ್ಯಕ್ರಮದ ಮೇಲ್ವಿಚಾರಕರು ಆದ ಅಬ್ದುಲ್ ರಹಿಮಾನ್ ಹಣಗಿ ಮತ್ತು ಸನ್ ರೈಸ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಇರ್ಷಾದ್ ಕೆ ಅತ್ತಾರ್ ಹಾಗೂ ಎಲ್ಲಾ ಉಪನ್ಯಾಸಕರುಗಳು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಕುವೆಂಪು ಅವರ ಆದರ್ಶಗಳನ್ನು ಸ್ಮರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

