ಮಸ್ಕಿ : ದೇವದುರ್ಗ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಶಿವನಗೌಡ ನಾಯಕ ಅವರ ಅಭಿಮಾನಿ ಬಳಗದಿಂದ 2026ರ ಹೊಸ ವರ್ಷದ ಕ್ಯಾಲೆಂಡರನ್ನು ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಲ್ಲಿ ಹಂಚಿಕೆ ಮಾಡಲಾಗುತ್ತಿದೆ ಎಂದು ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ ವೆಂಕಟಾಪೂರು ತಿಳಿಸಿದರು.
ಕೆ.ಶಿವನಗೌಡ ನಾಯಕ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಆದ್ದರಿಂದ ಇಂದು ರಾಯಚೂರು ಜಿಲ್ಲೆಯ ಪ್ರತಿಯೊಂದು ಕ್ಷೇತ್ರದಲ್ಲಿ ಹಾಗೂ ಪ್ರತಿಯೊಂದು ಹಳ್ಳಿಗಳಲ್ಲಿಯೂ ಅವರ ಅಭಿಮಾನಿಗಳು ಇದ್ದಾರೆ. ನಾವು ಕೂಡ ಕೆ ಶಿವನಗೌಡ ನಾಯಕರು ಅಭಿಮಾನಿಗಳು ಆದ್ದರಿಂದ ನಾವು ಅವರ ಮೇಲಿನ ಅಭಿಮಾನದಿಂದ ನೂತನ ವರ್ಷದ ಕ್ಯಾಲೆಂಡರ್ ಅನ್ನು ಮಸ್ಕಿ ಕ್ಷೇತ್ರದಲ್ಲಿ ಬಿಡುಗಡೆ ಮಾಡಿ ಪ್ರತಿಯೊಬ್ಬ ಅವರ ಅಭಿಮಾನಿಗಳಿಗೂ ನೂತನ ವರ್ಷದ ಕ್ಯಾಲೆಂಡರ್ ಅನ್ನು ತಲುಪಿಸುವ ಕಾರ್ಯವನ್ನು ಅಭಿಮಾನಿಗಳ ಬಳಗದಿಂದ ಹಂಚಿಕೆ ಮಾಡಲಾಗುತ್ತಿದೆ.
ಶಿವನಗೌಡ ನಾಯಕ ಅವರ ಅಭಿಮಾನಿಗಳು ಸ್ವಯಂ ಪ್ರೇರಣೆಯಿಂದ ಕಳೆದ ಎರಡ್ಮೂರು ದಿನಗಳಿಂದ ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿ ಕ್ಯಾಲೆಂಡರ್ ಹಂಚಿಕೆ ಮಾಡಿದ್ದಾರೆ. ಅದೇ ರೀತಿಯಾಗಿ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ 2026ರ ಹೊಸ ವರ್ಷದ ಕ್ಯಾಲೆಂಡರ್ ನ್ನು ತಲುಪಿಸಲಾಗುತ್ತದೆ ಎಂದು ತಿಳಿಸಿದರು.

