ರಾಯಚೂರು ಡಿಸೆಂಬರ್ 29 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ ವ್ಯಾಪ್ತಿಗೆ ಬರುವ 110/11 ಕೆವಿ ಚಿಕ್ಕಸೂಗೂರು, ಶಕ್ತಿನಗರ, ಯಾಪಲದಿನ್ನಿ, ಕೆಐಎಡಿಬಿ ಯರಮರಸ್ ಮತ್ತು 33/11ಕೆವಿ ಮಾಮಡಿದೊಡ್ಡಿ ವಿದ್ಯುತ್ ಉಪ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಡಿಸೆಂಬರ್ 30ರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 01ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
