ರಾಯಚೂರು ಡಿಸೆಂಬರ್ 29 (ಕರ್ನಾಟಕ ವಾರ್ತೆ): ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಯರಗೇರಾ ಗ್ರಾಮದಲ್ಲಿ ಸರ್ವಧರ್ಮ ಭಾವೈಕ್ಯತೆಯ ಸಂಕೇತವಾದ ಶ್ರೀ ದರ್ಗಾ ಹಜರತ್ ಬಡೇಸಾಹೇಬ್ ಉರುಸಿನಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ದದ್ದಲ್ ಅವರು ಭಾಗವಹಿಸಿ ಆಶೀರ್ವಾದ ಪಡೆದರು.
ಈ ಸಂಧರ್ಭದಲ್ಲಿ ಊರಿನ ಹಿರಿಯ ಮುಖಂಡರು, ಸುತ್ತಲಿನ ಗ್ರಾಮಗಳ ಮುಖಂಡರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.


