ರಾಯಚೂರು ಡಿಸೆಂಬರ್ 29 (ಕರ್ನಾಟಕ ವಾರ್ತೆ): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ರಾಯಚೂರು ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗೆ ಮೆರಿಟ್ ಆಧಾರದ ಮೇಲೆ ಆಯ್ಕೆಯಾದ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈ ಆಯ್ಕೆಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು 2026ರ ಜನವರಿ 3 ಕೊನೆಯ ದಿನವಾಗಿದೆ. ಜನವರಿ 3 ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಜನವರಿ 3ರೊಳಗೆ ಆಕ್ಷೇಪಣೆಗಳು ಬಾರದಿದ್ದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳನ್ನೇ ಅಂತಿಮ ಆಯ್ಕೆಪಟ್ಟಿಗೆ ಪರಿಗಣಿಸಲಾಗುವುದು ಎಂದು ರಾಯಚೂರು ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *