ಸಿರವಾರ : ತಾಲೂಕಿನ ನವಲಕಲ್ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ಸಮನ್ವಯ ಸಭೆ ಅತ್ಯಂತ ಅರ್ಥಪೂರ್ಣವಾಗಿ ನಡೆಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ನವಲಕಲ್ ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿದರು. ಅವರು ಮಾತನಾಡಿ, ಪುಟ್ಟರಾಜ ಗವಾಯಿಗಳಂತಹ ಮಹಾನ್ ವಿಕಲಚೇತನ ಸಾಧಕರನ್ನು ಸ್ಮರಿಸಿ, ವಿಕಲಚೇತನರು ಯಾವುದೇ ಕ್ಷೇತ್ರದಲ್ಲೂ ಸಾಮಾನ್ಯ ಜನರಿಗಿಂತ ಕಡಿಮೆಯಲ್ಲ, ಪೈಪೋಟಿ ನೀಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದರು. ಗ್ರಾಮೀಣ ಭಾಗದ ವಿಕಲಚೇತನರಿಗೆ ಮಾಹಿತಿ ಹಾಗೂ ಸರಿಯಾದ ಮಾರ್ಗದರ್ಶನ ಸಿಗುವುದು ಇಂತಹ ಕಾರ್ಯಕ್ರಮಗಳ ಮೂಲಕವೇ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ವಿಜಯಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷರಾದ ದುರ್ಗಮ್ಮ ದುರ್ಗಪ್ಪ, ಸಂಕಲ್ಪ ವಿಕಲಚೇತನರ ಒಕ್ಕೂಟದ ಗೌರವಾಧ್ಯಕ್ಷರಾದ ದೇಸಾಯಿ ದೊತರಬಂಡಿ, ಒಕ್ಕೂಟದ ಜಿಲ್ಲಾಧ್ಯಕ್ಷರಾದ ಶಿವಕುಮಾರ್ ಚಲ್ಮಲ್, ಜಿಲ್ಲಾ ಉಪಾಧ್ಯಕ್ಷರಾದ ಸಾವಿತ್ರಮ್ಮ, ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಶೇಖರಪ್ಪ ಮುರ್ಕಿಗುಡ್ಡ, ವಿಕಲಚೇತನ ಕಾರ್ಯಕರ್ತರಾದ ನಂದಕುಮಾರ್, ಅಯ್ಯಾಳಿ, ಮಲ್ಲಿಕಾರ್ಜುನ ಸೇರಿದಂತೆ ಅನೇಕ ವಿಕಲಚೇತನ ಬಂಧುಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶೋಭೆ ತಂದರು.
ಕಾರ್ಯಕ್ರಮದ ಮೂಲಕ ವಿಕಲಚೇತನರ ಹಕ್ಕು, ಗೌರವ, ಸಬಲೀಕರಣ ಹಾಗೂ ಸಮಾಜದಲ್ಲಿ ಸಮಾನ ಅವಕಾಶಗಳ ಕುರಿತು ಜಾಗೃತಿ ಮೂಡಿಸಲಾಯಿತು.

Leave a Reply

Your email address will not be published. Required fields are marked *