ಬೆಂಗಳೂರು, ನವೆಂಬರ್ 2026:
ಕರ್ನಾಟಕ ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗಾಗಿ ನವೆಂಬರ್ 2026ರಲ್ಲಿ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಪಕ್ಷವು ಅಂತಿಮಗೊಳಿಸಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯೊಂದಿಗೆ, ಈಶಾನ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಶರಣಪ್ಪ ಮಟ್ಟೂರು ಅವರನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ.
ಇದರ ಜೊತೆಗೆ, ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ
ಶ್ರೀ ಮೋಹನ್ ಲಿಂಬಿಕಾಯಿ
ಆಗ್ನೇಯ ಪದವೀಧರರ ಕ್ಷೇತ್ರಕ್ಕೆ
ಶ್ರೀ ಶಶಿ ಹುಲಿಕುಂಟೆಮಠ್
ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ
ಶ್ರೀ ಪುಟ್ಟಣ್ಣ ಇವರನ್ನು ಎಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಆದೇಶಿಸಿದ್ದಾರೆ
ಕಾಂಗ್ರೆಸ್ ಪಕ್ಷವು ಈ ಅಭ್ಯರ್ಥಿಗಳ ಮೂಲಕ 2026ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಲವಾದ ಹೋರಾಟ ನಡೆಸುವ ನಿರೀಕ್ಷೆ ಇದೆ.

