ರಾಯಚೂರು ಡಿಸೆಂಬರ್ 31 (ಕರ್ನಾಟಕ ವಾರ್ತೆ): .ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸೋಮಲಾಪೂರು ಗ್ರಾಮದಲ್ಲಿ 2026ರ ಜನವರಿ 2ರಿಂದ ಜನವರಿ 08ರವರಿಗೆ ಜರುಗುವ ಶ್ರೀ ಅಂಬಾದೇವಿ ಜಾತ್ರೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ದೇವಸ್ಥಾನದ ಆವರಣದಲ್ಲಿ ಅಥವಾ ಸೋಮಲಾಪೂರು ಗ್ರಾಮದ ಸಾರ್ವಜನಿಕ ವ್ಯಾಪ್ತಿಯಲ್ಲಿ ಭಕ್ತಾಧಿಗಳು, ಸಾರ್ವಜನಿಕರು ದೇವರ ಹೆಸರಿನಲ್ಲಿ ಯಾವುದೇ ರೀತಿಯ ಪ್ರಾಣಿ ಹಾಗೂ ಪಕ್ಷಿ ಬಲಿಯನ್ನು ನೀಡುವುದನ್ನು ನಿಷೇಧಿಸಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಿತೀಶ್ ಕೆ. ಅವರು ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆಯಡಿ ಆದೇಶ ಹೊರಡಿಸಿದ್ದಾರೆ.
